ಎ.ಸೀತಾರಾಮ್ ರವರ ಸ್ವಾರತ್ಯತ್ವದಲ್ಲಿ ಮೂಡಿಬರುತ್ತಿರುವ "ಸುವರ್ಣ ಲೇಖನಿ"ಹಾಗು "ನ್ಯೂಸ್ ಕರ್ನಾಟಕ1"

ಸುದ್ಧಿ ಹಾಗು ಜಾಹಿರಾತಕ್ಕೆ ಸಂರ್ಪಕಿಸಿ +91 8553310400

ಬೆಂ.ಗ್ರಾ. ಜಿಲ್ಲೆ: ಜಿಲ್ಲಾಡಳಿತ ಭವನದಲ್ಲಿ “ಸಂವಿಧಾನ ದಿನ” ಆಚರಣೆ


ಬೆಂಗಳೂರು ಗ್ರಾಮಾಂತರ ಜಿಲ್ಲೆ, ನವೆಂಬರ್ 26 ದೇವನಹಳ್ಳಿ ತಾಲ್ಲೂಕು ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು ಸಂವಿಧಾನ ದಿನ ವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.


ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತದ ವತಿಯಿಂದ ಗೌರವಪೂರ್ವಕ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಲಾಯಿತು. ಸಂವಿಧಾನ ಪ್ರಸ್ತಾವನೆಯನ್ನು ಈ ಸಂದರ್ಭದಲ್ಲಿ ಬೋಧಿಸಲಾಯಿತು.


ಕಾರ್ಯಕ್ರಮದ‌‌ಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಪ್ರೇಮ, ದೊಡ್ಡಬಳ್ಳಾಪುರ ಡಿವೈಎಸ್ಪಿ ರವಿ , ಜಿಲ್ಲಾಧಿಕಾರಿಗಳ ಕಚೇರಿ ಸಹಾಯಕರಾದ ರಾಜೀವ ಲೋಚನ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಕಚೇರಿ ಸಿಬ್ಬಂದಿ, ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

About The Author