ಎ.ಸೀತಾರಾಮ್ ರವರ ಸ್ವಾರತ್ಯತ್ವದಲ್ಲಿ ಮೂಡಿಬರುತ್ತಿರುವ "ಸುವರ್ಣ ಲೇಖನಿ"ಹಾಗು "ನ್ಯೂಸ್ ಕರ್ನಾಟಕ1"

ಸುದ್ಧಿ ಹಾಗು ಜಾಹಿರಾತಕ್ಕೆ ಸಂರ್ಪಕಿಸಿ +91 8553310400

ಜೂ.28 ರಂದು ಲೋಕಾಯುಕ್ತ ವತಿಯಿಂದ ಸಾರ್ವಜನಿಕರ ಕುಂದು-ಕೊರತೆಗಳ ಸಭೆ

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಕರ್ನಾಟಕ ಲೋಕಾಯುಕ್ತದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪೊಲೀಸ್ ಅಧೀಕ್ಷಕರಾದ ಪವನ್ ನೆಜ್ಜೂರ್ ರವರ ನೇತೃತ್ವದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಗೆ ಸಂಬಂಧಿಸಿದಂತೆ ದೂರುಗಳ ಕುರಿತು ಬೂದಿಗೆರೆ ಗ್ರಾಮದ ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಜೂನ್ 28 ರಂದು ಶುಕ್ರವಾರ ಬೆಳಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 01.30 ಗಂಟೆಯವರೆಗೆ ರಂದು ಸಾರ್ವಜನಿಕರ ಕುಂದುಕೊರತೆಗಳ ಮತ್ತು ಅಹವಾಲು ಸ್ವೀಕಾರ ಸಭೆಯನ್ನು ಏರ್ಪಡಿಸಲಾಗಿರುತ್ತದೆ.
ಸರ್ಕಾರಿ ಕಛೇರಿಗಳಲ್ಲಿ ಕೆಲಸ ಮಾಡಿಕೊಡಲು ಲಂಚಕ್ಕೆ ಬೇಡಿಕೆ ಇಡುವುದು, ವಿಳಂಬ ನಿರ್ಲಕ್ಷ್ಯ ಅಥವಾ ಅಧಿಕಾರ ದುರುಪಯೋಗ/ದುರಾಡಳಿತ ಮಾಡುತ್ತಿದ್ದಲ್ಲಿ ಅಂತಹ ಅಧಿಕಾರಿ/ಸಿಬ್ಬಂದಿಗಳ ಮೇಲೆ ಲಿಖಿತ ಅಹವಾಲುಗಳನ್ನು ಸ್ವೀಕರಿಸಲಿದ್ದೇವೆ. ಆ ದಿನ ಲಿಖಿತ ದೂರನ್ನು ದ್ವಿಪ್ರತಿಯಲ್ಲಿ ನೀಡಬಹುದಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಲೋಕಾಯುಕ್ತ ಸಂಸ್ಥೆಯ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಪವನ್ ನೆಜ್ಜೂರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About The Author